October 1, 2026

MRPL ಭೀಕರ ಸ್ಫೋಟ, ಅಗ್ನಿ ಅವಘಡ: MRPL ಸಂಸ್ಥೆ, ಘಟಕದ ಮುಖ್ಯಸ್ಥರ ವಿರುದ್ಧ FIR ದಾಖಲು

0
image_editor_output_image-889723803-1790824919549

ಮಂಗಳೂರು: ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ 3ನೇ ಹಂತದ (Phase-3) ‘ಕೋಕರ್ ಹೈಡ್ರೋ ಟ್ರೀಟರ್ ಘಟಕ’ದಲ್ಲಿ (CHTU) ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಎಂಆರ್‌ಪಿಎಲ್ ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಾಗಿದೆ.

ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆ ಉದ್ಯೋಗಿ ಮನೀಶ್ ಕರ್ಕೇರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದು, ಘಟನೆಯಲ್ಲಿ ಒಟ್ಟು 12 ಮಂದಿ ಕಾರ್ಮಿಕರು ಹಾಗೂ ಸಿಬ್ಬಂದಿ ಗಾಯಗೊಂಡಿದ್ದಾರೆ.

 

ಎಂಆರ್‌ಪಿಎಲ್‌ನ 3ನೇ ಹಂತದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಕೆ ಸ್ಟಾರ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್’ (K Star Food And Hospitality Services) ಸಂಸ್ಥೆಯ ನೌಕರರೊಬ್ಬರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಸ್ಥೆಯು ಎಂಆರ್‌ಪಿಎಲ್ ಉದ್ಯೋಗಿಗಳಿಗೆ ಊಟ, ಉಪಹಾರ ಮತ್ತು ಕುಡಿಯುವ ನೀರು ಸರಬರಾಜು ಮಾಡುವ ಕೆಲಸ ನಿರ್ವಹಿಸುತ್ತಿತ್ತು.

Leave a Reply

Your email address will not be published. Required fields are marked *

error: Content is protected !!