November 23, 2026

ಹಬ್ಬದ ಹೊಸ್ತಿಲಲ್ಲೇ ಕೇಂದ್ರ ಸರಕಾರದಿಂದ ಮತ್ತೊಂದು ಶಾಕ್:  ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ

0
image_editor_output_image-488226967-1790825613938

ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್  ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ.

ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಾಗಿದ್ದು, ಹಬ್ಬದ ಸೀಸನ್‌ಗೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಾಗಿದ್ದು, ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಡಾಬಾಗಳಲ್ಲಿ ನಿರ್ವಹಣಾ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ.


ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 62.50 ರೂ.ಗಳಷ್ಟು ಏರಿಕೆಯಾಗಿ 2,810 ರೂ. ತಲುಪಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್‌ನಲ್ಲಿ 2,747.50 ರೂಪಾಯಿಗಳಷ್ಟಿತ್ತು. ಇಂದಿನಿಂದಲೇ ಹೊಸ ದರ ಜಾರಿಯಾಗಲಿದ್ದು, ಗೃಹಬಳಕೆ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿವೆ.

Leave a Reply

Your email address will not be published. Required fields are marked *

You may have missed

error: Content is protected !!