ಸುಳ್ಯ: ಬೈಕ್ ಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಸುಳ್ಯ: ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕ ಎಂಬಲ್ಲಿ ಗ್ಯಾರೇಜಿನಲ್ಲಿ ಇರಿಸಿದ್ದ ಬೈಕ್ಗೆ ಬೆಂಕಿ ಹಾಕಿ ಸುಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳಾದ ಸುಳ್ಯ ಐವರ್ನಾಡು ನಿವಾಸಿಯಾದ ದಯಾನಂದ (30) ಮತ್ತು ಸುಳ್ಯ ಕಸಬಾ ನಿವಾಸಿ ದರ್ಶನರಾಜು (23 ) ಎಂದು ಗುರುತಿಸಲಾಗಿದೆ.
ಅಗಸ್ಟ್ 26 2026 ರಂದು ರಾತ್ರಿ, ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕ ಎಂಬಲ್ಲಿ ಗ್ಯಾರೇಜಿನಲ್ಲಿ ಇರಿಸಿದ್ದ ಬೈಕ್ ಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಾಕಿ ಸುಟ್ಟಿರುವ ಘಟನೆಗೆ ಸಂಬಂಧಿಸಿದಂತೆ, ಸುಳ್ಯ ಪೊಲೀಸ್ ಠಾಣಾ ಅ.ಕ್ರ 120/2026 ಕಲಂ: 326(g)BNS 2023 ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





