October 2, 2026

ಸುಳ್ಯ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

0
image_editor_output_image-553028038-1790883609770

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.ಆರೋಪಿ ಕೇರಳ ಕಾಸರಗೋಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.

ಪೊಲೀಸ್ ಠಾಣಾ ಅಕ್ರ:252/2014, U/S-399, 402 IPC ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 1 ವರ್ಷದಿಂದ ತಲೆಮರೆಸಿಕೊಂಡಿದ್ದ.

ಸುಳ್ಯ ಠಾಣಾ ಸಿಬ್ಬಂದಿಗಳಾದ HC 368 ರಾಜು ನಾಯ್ಕ , PC 2308 ಸಂತೋಷ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply

Your email address will not be published. Required fields are marked *

error: Content is protected !!