ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ: ಎಸ್‌ಐಟಿಗೆ ಮತ್ತೋರ್ವ ಅಧಿಕಾರಿ ನೇಮಕ
ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ.
ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.





