ಬಾಲಿ ಟ್ರಿಪ್ ವೇಳೆ ಅಪಘಾತ: ಬೆನ್ನು ಮೂಳೆ ಮುರಿದುಕೊಂಡ ನಟಿ
ಮುಂಬೈ: ಖ್ಯಾತ ಬಾಲಿವುಡ್ ನಟಿ ನುಸ್ರತ್ ಭರುಚಾಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದುಕೊಂಡಿದ್ದಾರೆ. ಸದ್ಯ ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಸಿನಿಮಾ ತಂಡದ ಪ್ರಚಾರಕಿ ಸಂಚಿತಾ ತ್ರಿವೇದಿ ಮಾಹಿತಿ ನೀಡಿದ್ದು, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳ ಬಳಿಕ ನುಸ್ರತ್ ಅವರ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಬಾಲಿಯಿಂದ ಮುಂಬೈಗೆ ವಿಮಾನದ ಮೂಲಕ ಕರೆತರಲು ಸಿದ್ಧತೆ ನಡೆಯುತ್ತಿದ್ದು, ಮುಂಬೈಗೆ ಬಂದ ಬಳಿಕ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಹೇಳಿದ್ದಾರೆ.




