ಪಾಟ್ರಕೋಡಿ: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು
ಪುತ್ತೂರು: ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್‌ವೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ, ಲೈನ್‌ಮ್ಯಾನ್ ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. ಕರ್ತವ್ಯದಲ್ಲಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.
ಕರೆ ಬಂದ ತಕ್ಷಣ ಸ್ಥಳಕ್ಕೆ ತೆರಳಿ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತಿದ್ದ ರವಿ ಅವರು ಗ್ರಾಮಸ್ಥರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದ ಅವರು ಗ್ರಾಮಸ್ಥರ ಅಚ್ಚುಮೆಚ್ಚಿನವರಾಗಿದ್ದರು.
ರವಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಕೆದಿಲ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.





