October 3, 2026

ಅಕ್ಟೋಬರ್ 6ರಂದು ವಿಟ್ಲದಲ್ಲಿ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಮಿಲನೋತ್ಸವ: ಸಮಾರಂಭದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಮತ್ತು ಮನೊರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ: ಜಿಲ್ಲಾ ಸಂಘದ ಅಧ್ಯಕ್ಷ ಬಾಬು ಕೆ ವಿ ಮಾಹಿತಿ

0
IMG-20261003-WA0006

ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ಆತಿಥ್ಯದಲ್ಲಿ ಅ‌ 6ರ ಮಂಗಳವಾರ ಜಿಲ್ಲಾ ವಾರ್ಷಿಕ ಮಿಲನೋತ್ಸವ ವಿಟ್ಲ ಬಸವನಗುಡಿ ಜೇಸೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಲಿದೆ ಎಂದು ಜಿಲ್ಲಾ ಸಂಘದ ಅಧ್ಯಕ್ಷ ಬಾಬುಕೆ. ವಿಟ್ಲ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದ ಅವರು ಪೂರ್ವಾಹ್ನ 9 ಗಂಟೆಯಿಂದ ಸಾಯಂಕಾಲ 6 ಗಂಟೆ ತನಕ ನಡೆಯುವ ಸಮಾರಂಭದಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ ಮತ್ತು ಮನೊರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

 



ಪೂರ್ವಾಹ್ನ 9 ಗಂಟೆಗೆ ಕಾರ್ಯಕ್ರಮವನ್ನು ವಿಟ್ಲ ಅರಮನೆಯ ಬಂಗಾರು ಅರಸರು ಉದ್ಘಾಟಿಸಲಿದ್ದಾರೆ.ಬಾಬು ಕೆ. ವಿಟ್ಲ ಅಧ್ಯಕ್ಷತೆ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ರಾಜ್ಯ ಆರೋಗ್ಯ ಸಚಿವ ಯು.ಟಿ.‌ಖಾದರ್, ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ,ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು,  ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷ ಎಚ್. ಜಗನ್ನಾಥ ಸಾಲಿಯಾನ್, ಜೇಸೀ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಶ್ರೀಧರ ಶೆಟ್ಟಿ ಮೊದಲಾದವರು  ಭಾಗವಹಿಸಲಿದ್ದಾರೆ. ಸಂಜೆ ಐದು ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಟ್ಲ ಪೊಲೀಸ್ ನಿರೀಕ್ಷಕ ಪ್ರಕಾಶ ದೇವಾಡಿಗ, ಗಣ್ಯರಾದ ಚಂದ್ರಹಾಸ ಸುವರ್ಣ , ಸಂಜೀವ ಪೂಜಾರಿ ಮೊದಲಾದವರು ಪಾಲ್ಗೊಳ್ಳುವರು ಎಂದರು.



ಮಿಲನೋತ್ಸವ ದಲ್ಲಿ ಸುಮಾರು 2,000 ಜನರ ನಿರೀಕ್ಷೆ ಮಾಡಲಾಗಿದೆ.ಸಂಘದ ಸದಸ್ಯರಿಗಷ್ಟೇ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದೆ ಸಂಘವು ಎಲ್ಲಾ ತಾಲೂಕುಗಳಲ್ಲಿ ಘಟಕಗಳನ್ನು ಹೊಂದಿದೆ. ಜಿಲ್ಲಾ ಸಂಘವು ಎಂಟು ವರ್ಷಗಳನ್ನು ಪೂರೈಸಿದರೆ
ವಿಟ್ಲ ಘಟಕ ಹತ್ತು ವರ್ಷಗಳನ್ನು ಪೂರೈಸಿದೆ ಎಂದರು‌
ಸಂಘವು ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ನೆರವಾಗಿದೆ‌ ಮುಂದಿನ ದಿನಗಳಲ್ಲಿ  ಅಮ್ಟಾಡಿ ಬಾಂಬಿಲ
ಸ್ವಂತ ನಿವೇಶನದಲ್ಲಿ ಕಟ್ಟಡ ನಿರ್ಮಾಣದ ಯೋಜನೆಯ ಹಾಕಿಕೊಂಡಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಕೋಶಾಧಿಕಾರಿ ನಿಶಿತ್ ಪೂಜಾರಿ, ಹಿರಿಯ ಸದಸ್ಯ ಸಂಜೀವ ಪೂಜಾರಿ, ವಿಟ್ಲ ಘಟಕದ ಅಧ್ಯಕ್ಷ  ಪದ್ಮನಾಭ ಶೆಟ್ಟಿ ಮಂಕುಡೆ ಕಲ್ಕಾಜೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಶೆಟ್ಟಿ ಬರೆ , ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!