October 5, 2026

“ಸುಂಟರಗಾಳಿ” ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

0
image_editor_output_image1539250106-1791136429572

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಅಭಿನೇತ್ರಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯು (ಸ್ಟ್ರೋಕ್) ಪೀಡಿತರಾಗಿದ್ದರು.

ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಅವರಿಗೆ ಇತ್ತೀಚೆಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಸರೆ ನೀಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.


ನಟ ದರ್ಶನ್ ಅಭಿನಯದ ಹಿಟ್ ‘ಸುಂಟರಗಾಳಿ’ ಚಿತ್ರದಲ್ಲಿ ಖಳನಾಯಕಿಯಾಗಿ ಅಭಿನಯಿಸಿದ್ದ ಲಲಿತಮ್ಮ, ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು.

ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ನಟನಾ ಕೌಶಲಕ್ಕೆ ಸಾಕ್ಷಿಯಾಗಿ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು.

ಸಿನಿಮಾಗಳು ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಅನೇಕ ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಹಿರಿಯ ನಟಿಯ ಅಗಲಿಕೆಗೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!