October 5, 2026

ಟ್ರೆಕ್ಕಿಂಗ್ ವೇಳೆ ಈಜಲು ಹೋಗಿ ಟೆಕ್ಕಿ ಸಾವು

0
image_editor_output_image1542944190-1791138097051

ಬೆಂಗಳೂರು: ಜಿಗಣಿ  ಸಮೀಪದ ಯಲ್ಲಮ್ಮನದೊಡ್ಡಿನಲ್ಲಿ ಟ್ರೆಕ್ಕಿಂಗ್  ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಟೆಕ್ಕಿ  ವಿನಯ್ ಮೃತದೇಹ ಕೊನೆಗೂ ಪತ್ತೆಯಾಗಿದೆ.

ಕಲ್ಲು ಕ್ವಾರಿಯ ನೀರಿನಲ್ಲಿ ವಿನಯ್ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸೇರಿದಂತೆ ಈಶ್ವರ್ ಮಲ್ಪೆ ಮುಳುಗು ತಜ್ಞರ ತಂಡದಿಂದ ಎರಡು ದಿನಗಳಿಂದ ಕಲ್ಲು ಕ್ವಾರಿಯ ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ನಿರಂತರ ಹುಡುಕಾಟದ ಬಳಿಕ ಕೊನೆಗೂ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹವನ್ನ ಅತ್ತಿಬೆಲೆಯ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Leave a Reply

Your email address will not be published. Required fields are marked *

error: Content is protected !!