October 6, 2026

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಡಿಐಜಿ ಸೋಮಶೇಖರ್ ಅರೆಸ್ಟ್

0
image_editor_output_image111066198-1791270708158

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಹಾಗೂ ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.


2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ.

 

Leave a Reply

Your email address will not be published. Required fields are marked *

error: Content is protected !!