ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತವಾದ ಘಟನೆ ಅ.6ರಂದು ನಡೆದಿದೆ.
ಕರಿಕ್ಕಳ ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಎದುರಿಂದ ಹೋಗುತ್ತಿದ್ದ ಕಾರು ಹಠಾತ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ಇನ್ನೋವಾ ಕಾರು ಎದುರಿನ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಶಾಸಕರ ಕಾರಿನ ಮುಂಭಾಗ ಜಖಂಗೊಂಡಿದೆ.





