ಲಾರಿಗೆ ಕಾರು ಢಿಕ್ಕಿ: ಮೂವರು ಸಾವು, ಇಬ್ಬರಿಗೆ ಗಾಯ
ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಕಾರಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಸವರಾಜ್ (21) ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




