October 7, 2026

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಧರಣಿ: ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ

0
image_editor_output_image-1859903901-1791314417611

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಆಕಾಶವಾಣಿ ಭವನದಲ್ಲಿ ಇಂಡಿಯಾ ಒಕ್ಕೂಟದ ಸಂಸದರು ಧರಣಿ ಕೂತಿದ್ದರು. ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮಕೈಗೊಂಡು ವಶಕ್ಕೆ ತೆಗೆದುಕೊಂಡಿದ್ದಾರೆ

 

ಪ್ರತಿಭಟನಾಕಾರರು ಒಳಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ರಾಹುಲ್‌ ಗಾಂಧಿ ಬ್ಯಾರಿಕೇಡ್‌ ಮೇಲತ್ತಿ ರಾಷ್ಟ್ರಧ್ವಜ ಹಾರಿಸಿ ಪ್ರತಿಭಟನೆ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!