ಜನವರಿ ಮೊದಲ ವಾರದಲ್ಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ
ಬೆಂಗಳೂರು: ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸುವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.
ಬಹುತೇಕ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸಂಪುಟದ ಒಲವು ವ್ಯಕ್ತವಾಗಿದೆ ಎನ್ನಲಾಗುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರದ ನಿರ್ಧರಿಸಿದೆ ಎನ್ನಲಾಗಿದೆ.
ಎಸ್‌ಐಆರ್ ಬಗ್ಗೆಯು ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಫಾರಂ ನಂಬರ್ 7 ವಿವಾದದ ತನಿಖೆಗೆ ಎಸ್‌ಐಟಿ ರಚನೆಗೆ ಅವಕಾಶ ಇಲ್ಲ ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಎಫ್‌ಐಆರ್ ದಾಖಲಾಗಿರುವ ಪ್ರಕರಣದ ಬಗ್ಗೆ ಸ್ಥಳಿಯವಾಗಿಯೇ ತನಿಖೆ ಚುರುಕುಗೊಳಿಸಲು ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.





