ವಿಟ್ಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ವಿಟ್ಲ: ಬ್ಯಾಂಕಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಲ್ನಾಡು ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ.
ಬ್ಯಾಂಕಿನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರನ್ನು ನಂಬಿಸಿ ಅವರಿಂದ ಹಣ ಪಡೆದು, ಉದ್ಯೋಗ ಕೊಡಿಸದೆ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2011ರಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಅ.5ರಂದು ಹಿಬ್ಬಾತುಲ್ಲನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.





