October 7, 2026

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ

0
image_editor_output_image123785271-1791350433209

ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್ ಎಸ್. ಕುಮಾರ್(14) ಎಂಬ ಬಾಲಕನ ಮೃತದೇಹ ಮಂಗಳವಾರ ಸಂಜೆ ಹೆಜಮಾಡಿ ಕೋಡಿಯ ಶಾಂಭವಿ ನದಿ ತೀರದಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿಯ ಕಸಬಾ ಗ್ರಾಮದ ರೆಂಕೆದ ಗುತ್ತು ನಿವಾಸಿಯಾಗಿದ್ದ ಶ್ರೇಯಸ್, ಹುಲಿವೇಷ ಕುಣಿತದ ತರಬೇತಿಗಾಗಿ ತನ್ನ ಸ್ನೇಹಿತರೊಂದಿಗೆ ಅಕ್ಟೋಬರ್ 4 ರಂದು ಮಂಗಳೂರಿಗೆ ಬಂದಿದ್ದನು. ತರಬೇತಿಯ ನಂತರ, ಅವರೆಲ್ಲರೂ ಬಸ್ಸಿನಲ್ಲಿ ಪಣಂಬೂರಿಗೆ ತೆರಳಿದ್ದರು. ಸಂಜೆ ಕಡಲತೀರದಲ್ಲಿ ಆಟವಾಡುತ್ತಿದ್ದಾಗ ಶ್ರೇಯಸ್ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದನು.

ಆದರೆ, ಈ ಘಟನೆಯಿಂದ ಭಯಬಿದ್ದ ಆತನ ಸ್ನೇಹಿತರು ತಕ್ಷಣ ಕುಟುಂಬಸ್ಥರಿಗೆ ವಿಷಯ ತಿಳಿಸದೆ, ಮರುದಿನ ಬೆಳಗ್ಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟದ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಶ್ರೇಯಸ್ ಅವರ ತಂದೆ ಶೇಷಪ್ಪ ಅವರು ಮೃತದೇಹವನ್ನು ಗುರುತಿಸಿದ್ದಾರೆ. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!