ಹಿರಿಯ ನಟ ನಾನಾ ಪಾಟೇಕರ್ ಹೃದಯಾಘಾತದಿಂದ ನಿಧನ
ಪಣಜಿ ಭಾರತೀಯ ಚಿತ್ರರಂಗದ ಹಿರಿಯ ಹಾಗೂ ದಂತಕಥೆಯಂತಿದ್ದ ನಟ ನಾನಾ ಪಾಟೇಕರ್ (75) ಅವರು ಗೋವಾದ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ 5:20ರ ಸುಮಾರಿಗೆ ಗೋವಾದ ಸ್ವಗೃಹದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅವರನ್ನು ತಕ್ಷಣವೇ ಸ್ಥಳೀಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ (CPR) ನೀಡಿ ಜೀವ ಉಳಿಸಲು ಸತತ ಪ್ರಯತ್ನ ನಡೆಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹಾಗೂ ಕುಟುಂಬಸ್ಥರಿಂದ ಹೆಚ್ಚಿನ ವಿವರಗಳು ಶೀಘ್ರದಲ್ಲೇ ಹೊರಬರಲಿವೆ.






