ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು
ಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಉಣಕಲ್ ಗ್ರಾಮದ ಗಣೇಶ್ ಕಾಲೋನಿ ನಿವಾಸಿ ಸಿದ್ಧಾರ್ಥ್ ಮೃತ ದುರ್ದೈವಿ. ಸಿದ್ಧಾರ್ಥ್ 1ನೇ ತರಗತಿ ಓದುತ್ತಿದ್ದ. ಬೆಳಗ್ಗೆ 9 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ನೀರು ತೆಗೆಯಲು ತೆರೆದಿದ್ದ ಸಂಪಿನಲ್ಲಿ ಆಯತಪ್ಪಿ ಬಾಲಕ ಬಿದ್ದಿದ್ದಾನೆ.
ಬಾಲಕ ಬಿದ್ದಿದ್ದನ್ನು ಗಮನಿಸಿದ ತಂದೆ ನಾಗಪ್ಪ ರಕ್ಷಣೆಗೆ ಯತ್ನಿಸಿದ್ದು, ಕೂಡಲೇ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.






