October 8, 2026

ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

0
image_editor_output_image254715032-1791455833165

ಬಳ್ಳಾರಿ: ಈಜಲು  ತೆರಳಿದ್ದ ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಹರಿಯುವ ವೇದಾವತಿ ನದಿಯಲ್ಲಿ  ನಡೆದಿದೆ.

ರಾರಾವಿ ಗ್ರಾಮದ ಓಂ ಪ್ರಸಾದ್ (15) ಮೃತ ಬಾಲಕ. 10ನೇ ತರಗತಿಯಲ್ಲಿ ಓದುತ್ತಿದ್ದ ಮೃತ ಬಾಲಕ ಓಂ ಪ್ರಸಾದ್, ಶಾಲೆಗೆ ರಜೆ ಹಿನ್ನೆಲೆ ಮಂಗಳವಾರ ಸಂಜೆ ಸ್ನೇಹಿತರ ಜೊತೆ ವೇದಾವತಿ ನದಿಗೆ ಈಜಾಡಲು ತೆರಳಿದ್ದ. ನೀರಿನ ಆಳ ಅರಿಯದೇ ನದಿಗೆ ಇಳಿದಾಗ, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿದ್ದ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಗ್ನಿ ಶಾಮಕ ಸಿಬ್ಬಂದಿ ಜೊತೆ ಸ್ಥಳೀಯರೂ ಸೇರಿ ಶೋಧ ಕಾರ್ಯ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಂದು ಬೆಳಗ್ಗೆ ಬಾಲಕನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!