October 9, 2026

ಆನ್‌ಲೈನ್ ಗೇಮ್‌ಗೆ ಸ್ನೇಹಿತರಿಂದ ಹಣಕ್ಕಾಗಿ ಟಾರ್ಚರ್: ಮನನೊಂದು ನೇಣಿಗೆ ಶರಣಾದ ಬಾಲಕ

0
image_editor_output_image347780432-1791488111783

ದಾವಣಗೆರೆ: ಆನ್‌ಲೈನ್ ಗೇಮ್ ಗೀಳಿನಿಂದ ಸ್ನೇಹಿತರು ನೀಡಿದ ಟಾರ್ಚರ್‌ಗೆ ಬೇಸತ್ತು ಬಾಲಕನೊಬ್ಬ ನೇಣಿಗೆ ಶರಣಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ.

ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್‌ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!