October 9, 2026

ಅಸ್ಸಾಂ ಡ್ಯಾನ್ಸರ್‌ ಶವವಾಗಿ ಪತ್ತೆ

0
image_editor_output_image575841337-1791528055065

ಅಮರಾವತಿ: ರೈಲಿನಲ್ಲಿ ‘ನನ್ನ ಸುತ್ತಲೂ ಪುರುಷರೇ ಇದ್ದಾರೆ’ ಎಂದು ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಕೊನೆಯ ಮೆಸೇಜ್‌ ಕಳಿಸಿದ್ದ ಅಸ್ಸಾಂನ  ಡ್ಯಾನ್ಸರ್‌ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಅಸ್ಸಾಂನ ಕಾಮರೂಪ್ ಜಿಲ್ಲೆಯ 20 ವರ್ಷದ ಯುವತಿ ವಿಶಾಖಪಟ್ಟಣದಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು. ಕಾರ್ಯಕ್ರಮ ಮುಗಿಸಿ, ಅ.10 ರಂದು ಗುವಾಹಟಿಯಲ್ಲಿ ಬ್ಯಾಂಕ್ ಪರೀಕ್ಷೆ ಇದ್ದಿದ್ದರಿಂದ ಮನೆಗೆ ಮರಳಲು ನಿರ್ಧರಿಸಿದ್ದಳು. ‘ದಿಬ್ರುಗಢ್ ವಿವೇಕ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ವಾಪಸ್‌ ಆಗುವಾಗ ನಾಪತ್ತೆಯಾಗಿದ್ದಳು. ಆಕೆಯ ಶವ ಶ್ರೀಕಾಕುಳಂ ಜಿಲ್ಲೆಯಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ.

 

Leave a Reply

Your email address will not be published. Required fields are marked *

error: Content is protected !!