October 9, 2026

ವಿಟ್ಲ: ಬ್ಲಾಕ್ ಕಾಂಗ್ರೆಸ್‌ನಿಂದ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

0
image_editor_output_image1237131155-1791556382460

ವಿಟ್ಲ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ವಿವಾದಾತ್ಮಕ ಧೋರಣೆ ಹಾಗೂ ಎಸ್‌ಐಆರ್ ಅಕ್ರಮಗಳನ್ನು ತೀವ್ರವಾಗಿ ಖಂಡಿಸಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ  ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಕಪ್ಪು ಪಟ್ಟಿ ಧರಿಸಿ  ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು,  ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ  ಮಾತನಾಡಿದರು.
ಈ ವೇಳೆ ಆಕ್ರೋಶಗೊಂಡ ಪ್ರತಿಭಟನಾಕಾರರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ, ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಕೊರತೆ ಹಾಗೂ ಅಕ್ರಮಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

 


ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ವಿಟ್ಲ ಪಟ್ಟಣ ಪಂಚಾಯಿತಿ ವಿರೋಧ ಪಕ್ಷದ ನಾಯಕ ವಿ.ಕೆ.ಎಂ. ಅಶ್ರಫ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ವಿ. ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಹಾನೆಸ್ಟ್ ಇಕ್ಬಾಲ್, ವಿಟ್ಲ ಉಪವಿಭಾಗ ಮೆಸ್ಕಾಂ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು, ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನಕರ ಆಳ್ವ, ವಿಟ್ಲ ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಎಂ. ಹಂಝ, ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷ ಕೇಶವ ನಾಯ್ಕ, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ಬು ನವಗ್ರಾಮ, ಮೆಸ್ಕಾಂ ಶಾಖ ಸಲಹಾ ಸಮಿತಿ ಸದಸ್ಯ ಸಿರಾಜ್ ಮಣಿಲ, ವಲಯ ಅಧ್ಯಕ್ಷರುಗಳಾದ ಸೀತಾರಾಮ ಶೆಟ್ಟಿ ಅಳಿಕೆ, ಕೋಟಿ ಪೂಜಾರಿ, ಸಂತೋಷ್, ಶೈಕ್ ಅಲಿ ಸೆರಾಜೆ, ಸುಶಾಂತ್ ಶೆಟ್ಟಿ  ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಂಶೀರ್ ನೆಲ್ಲಿಗುಡ್ಡೆ, ಹಾಗೂ ಪ್ರಮುಖರಾದ ಸದಾಶಿವ ಶೆಟ್ಟಿ,ರಾಲ್ಪು ಡಿಸೋಜ ಪೆರುವಾಯಿ, ಷರೀಫ್ ಒಕ್ಕೆತ್ತೂರು, ಆನಂದ ಅರ್ಕ, ಷರೀಫ್ ಸೆರಾಜೆ, ಅಝೀಜ್ ಸನ, ರಜಾಕ್ ಎನ್.ಕೆ.ಚೇತನ್ ಕುಳ, ಸಮದ್ , ಹಂಝ ಚೆಂಡುಕಲ,ಇಸಾಕ್ ಮಾಯಾವಿ, ಅತಾವುಲ್ಲಾ ನವಗ್ರಾಮ, ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
,,,,,,,,,,,,

Leave a Reply

Your email address will not be published. Required fields are marked *

error: Content is protected !!