October 10, 2026

ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ಪೊಲೀಸ್ ಸಿಬ್ಬಂದಿ

0
image_editor_output_image-898489209-1791617715107

ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ‌ ತಾಲೂಕಿನ ಮಹಾಗಾಂವ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯೊಬ್ಬರು ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸ್ ಪೇದೆ ಹಣಮಂತ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

ಹಣಮಂತ ಅವರು ಹರಸೂರು ಗ್ರಾಮದ ಮಸೀದಿ ಮೇಲೆ ನಿಂತು ಬಿಯರ್‌ ಕುಡಿದಿದ್ದರು. ಇದನ್ನು ಗ್ರಾಮಸ್ಥರು ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್‌ ಆದ ಬೆನ್ನಲ್ಲೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹರಸೂರು ಗ್ರಾಮದಲ್ಲಿ ಗಲಾಟೆಯಾಗಿತ್ತು. ಆ ಹಿನ್ನಲೆಯಲ್ಲಿ ಬಂದೋಬಸ್ತ್‌ಗಾಗಿ ಹಣಮಂತ ಅವರನ್ನು ಮಸೀದಿ ಬಳಿ ನಿಯೋಜನೆ ಮಾಡಲಾಗಿತ್ತು. ಆದರೆ ಕರ್ತವ್ಯದಲ್ಲಿದ್ದಾಗಲೇ ಅವರು ಬಿಯರ್‌ ಕುಡಿದಿದ್ದರು. ಮಧ್ಯ ಸೇವಿಸಿರೋದು ಧೃಡಪಟ್ಟ ಹಿನ್ನಲೆಯಲ್ಲಿ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!