October 10, 2026

ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ: ಆರೋಪಿ ಶಿವಪ್ರಸಾದ್ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಪೊಲೀಸರು

0
image_editor_output_image-547089096-1791621101670

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಶಿವಪ್ರಸಾದ್ ಅವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಪೊಲೀಸರು ಅ.8ರಂದು ಜಪ್ತಿ ಮಾಡಿದ್ದಾರೆ.

ಅ.5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ವೇಳೆ, ಶಿವಪ್ರಸಾದ್ ಅವರು ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಪತ್ರಗಳನ್ನು ಪಡೆಯದೆ ಅಕ್ರಮವಾಗಿ ಮಾರಾಟ ಮಾಡಿರುವ ಹಿನ್ನೆಲೆಯಲ್ಲಿ, ನಿಯಮಾನುಸಾರ ಕ್ರಮ ಕೈಗೊಂಡು ಅವರ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

 

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 125/2026ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!