October 11, 2026

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1930420330-1791690307665

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಮತ್ತೊಂದು ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಬಂಧಿತ ಆರೋಪಿ.

 

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಹನೀಫ್, ಸುದೀರ್ಘ ಅವಧಿಯಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿಯೂ ಆರೋಪಿಯಾಗಿದ್ದು, ಈತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಅ.9ರಂದು ಮೂಡಬಿದ್ರೆ ತಾಲೂಕಿನ ಶಿರ್ತಾಡಿಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!