October 12, 2026

ಮಂಗಳೂರು: ದಸರಾ ರಜೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
image_editor_output_image943049356-1791784879796

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ನಾಡಹಬ್ಬ ದಸರಾ ಆಚರಣೆ ಹಾಗೂ ಮಂಗಳೂರು ದಸರಾದಲ್ಲಿ ಭಾಗವಹಿಸಬೇಕಿದ್ದ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರೂ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾದ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರು ಸುದ್ದಿ ಸೇವೆ

 

ಪರೀಕ್ಷೆಯನ್ನು ಮುಂದೂಡುವಂತೆ ಕಾಲೇಜು ಆಡಳಿತಕ್ಕೆ ಮುಂಚಿತವಾಗಿ ಮನವಿ ಸಲ್ಲಿಸಿದ್ದರೂ, ಆಡಳಿತ ಮಂಡಳಿಯು ಸ್ಪಂದಿಸದೆ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡು ನೂರಾರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಕುಳಿತು ಪ್ರತಿಭಟನೆ ನಡೆಸಿದರು. ಎಬಿವಿಪಿ ವಿದ್ಯಾರ್ಥಿ ಸಂಘಟನೆಯೂ ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ಅಧಿಕೃತ ದೂರು ನೀಡಲಾಗಿದೆ.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು, ಎಬಿವಿಪಿ ವಿದ್ಯಾರ್ಥಿ ನಾಯಕರನ್ನು ವಶಕ್ಕೆ ಪಡೆದು ಪೊಲೀಸ್ ಜೀಪಿನಲ್ಲಿ ಕರೆದೊಯ್ಯಲು ಮುಂದಾದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಮತ್ತು ಕಾರ್ಯಕರ್ತರು ಪೊಲೀಸ್ ಜೀಪ್‌ಗೆ ಅಡ್ಡಲಾಗಿ ನಿಂತು, ರಸ್ತೆ ಬಂದ್ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಡಿಸಿಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರೂ, ವಿದ್ಯಾರ್ಥಿಗಳು ಜೀಪ್ ಎದುರೇ ಮಲಗಿ ನಾಯಕರ ಬಿಡುಗಡೆಗೆ ಪಟ್ಟು ಹಿಡಿದರು.

Leave a Reply

Your email address will not be published. Required fields are marked *

error: Content is protected !!