ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆಗೆ ಮತ್ತೆ 1 ತಿಂಗಳ ಗಡುವು ವಿಸ್ತರಣೆ
ಬೆಂಗಳೂರು: ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆಗೆ ಮತ್ತೆ ಒಂದು ತಿಂಗಳ ಗಡುವು ವಿಸ್ತರಣೆ ಮಾಡಲಾಗಿದ್ದು, ಅ.31ರವರೆಗೆ ಅವಕಾಶ ನೀಡಲಾಗಿದೆ.
ಜುಲೈ 1ರಿಂದ ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆಗೆ ಆರಂಭವಾಗಿತ್ತು. ಮೊದಲಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಅದಾದ ಬಳಿಕ ಮನೆ ಮಾಲೀಕರು ಮತ್ತು ಬಾಡಿಗೆದಾರರ ಹೆಚ್ಚುವರಿ ದಾಖಲೆ ಸಂಗ್ರಹ ಹಿನ್ನೆಲೆ ಗಡುವನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ಮತ್ತೆ ಒಂದು ತಿಂಗಳ ಕಾಲ ಸಮಯ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಮರುಪರಿಶೀಲನೆಗೆ ಒಟ್ಟು ನಾಲ್ಕು ತಿಂಗಳ ಕಾಲಾವಕಾಶ ನೀಡಿದಂತಾಗಿದೆ.






