ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಚಿಕ್ಕಮಗಳೂರು: ವಾವಾಚಾರ, ದೆವ್ವ ಬಿಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು.
ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಕೊನೆಗೂ ಬಂಧಿಸಿದ್ದಾರೆ.
ದೆವ್ವ ಬಿಡಿಸುವುದಾಗಿ ಹೇಳಿ ಹಾಸನ ಮೂಲದ ಮಹಿಳೆಯ ಮೇಲೆ ಆರೋಪಿ ಸತೀಶ್ ಪಾತ್ರಿ ನಿರಂತರವಾಗಿ ಅತ್ಯಾಚಾರವೆಸಿದ್ದ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದರು.
ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಎಫ್ಐಆರ್ ಆಗುತ್ತಿದ್ದಂತೆ ಪರಾರಿಯಾಗಿದ್ದ ಸತೀಶ್, ಒಂದು ತಿಂಗಳ ಬಳಿಕ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸಂತ್ರತೆಯ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ (ಬ್ಲಾಕ್ ಮ್ಯಾಜಿಕ್) ಕಾಯ್ದೆಯಡಿ ಮತ್ತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಪೊಲೀಸರು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.






