ಮಂಗಳೂರು: ಅ. 14ರಂದು ಸಚಿವ ಯು.ಟಿ. ಖಾದರ್ ಜನ್ಮದಿನದ ಪ್ರಯುಕ್ತ ಮಂಗಳೂರು ಜನಪ್ರಿಯ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಜನ್ಮದಿನದ ಪ್ರಯುಕ್ತ ಮಂಗಳೂರಿನ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಅಕ್ಟೋಬರ್ 14ರಂದು ಬುಧವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
“ಆರೋಗ್ಯವೇ ಮಹಾಭಾಗ್ಯ, ಆರೋಗ್ಯವಂತ ಸಮಾಜವೇ ನಮ್ಮ ಗುರಿ” ಎಂಬ ಆಶಯದೊಂದಿಗೆ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರವು ಅಕ್ಟೋಬರ್ 14ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಂಗಳೂರಿನ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ.
ಶಿಬಿರದಲ್ಲಿ ನರರೋಗ, ಹೃದ್ರೋಗ ಹಾಗೂ ಮೂತ್ರರೋಗ ತಜ್ಞರಿಂದ ಉಚಿತ ವೈದ್ಯಕೀಯ ಸಮಾಲೋಚನೆ ಲಭ್ಯವಿರಲಿದೆ. ಇದರೊಂದಿಗೆ ಸಾಮಾನ್ಯ ವೈದ್ಯರಿಂದಲೂ ಉಚಿತ ಸಮಾಲೋಚನೆ ನೀಡಲಾಗುವುದು. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಪರೀಕ್ಷೆಗಾಗಿ ಉಚಿತ GRBS ಪರೀಕ್ಷೆಯ ವ್ಯವಸ್ಥೆಯನ್ನೂ ಮಾಡಲಾಗಿದೆ.
ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಶಾರೂಖ್ ಅಬ್ದುಲ್ಲ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ದೂರವಾಣಿ: 0824-3500786
ಮೊಬೈಲ್: 89709 97979






