ನವದೆಹಲಿ: ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕಿ ಮತ್ತು ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಡಾ. ಸುಧಾ ಯಾದವ್ ಅವರಿಗೆ ಕರ್ನಾಟಕದ ರಾಜ್ಯಪಾಲರ ಜವಾಬ್ದಾರಿ ವಹಿಸಲಾಗಿದೆ.