October 13, 2026

ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಮುಳುಗಿ ಸಾವು

0
image_editor_output_image1681884570-1791874639558

ಬೆಂಗಳೂರು: ಕಾಲೇಜಿನಲ್ಲಿ ಗಣೇಶ ಕೂರಿಸಿದ್ದೇವೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ನಡೆದಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸಿಗಳಾದ ವಿಶ್ವನಾಥ್ ಮತ್ತು ಭವ್ಯ ದಂಪತಿಯ ಪುತ್ರ ಹರ್ಷ (20) ಮೃತಪಟ್ಟ ದುರ್ದೈವಿ.

 

ಸೋಮವಾರ ಮನೆಯಲ್ಲಿ ದೇವರ ಪೂಜೆ ಮುಗಿಸಿದ ಹರ್ಷ, “ನಮ್ಮ ಕಾಲೇಜಿನಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿದ್ದೇವೆ” ಎಂದು ತಾಯಿಗೆ ತಿಳಿಸಿ ಮನೆಯಿಂದ ಹೊರಟಿದ್ದನು. ಆದರೆ ಆತ ಕಾಲೇಜಿಗೆ ತೆರಳುವ ಬದಲು, ಸ್ನೇಹಿತರೊಂದಿಗೆ ಹೆಸರಘಟ್ಟ ಕೆರೆಗೆ ಬಂದಿದ್ದಾನೆ. ಈ ವೇಳೆ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದು, ಈಜು ಸರಿಯಾಗಿ ಬಾರದ ಕಾರಣ ಆಯತಪ್ಪಿ ಆಳವಾದ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!