October 14, 2026

ವಿಶ್ವದ ಅತಿದೊಡ್ಡ ತೈಲ ಕಂಪನಿ ಅರಾಮ್ಕೊ ಮೇಲೆ ಹೌತಿಗಳು ಕ್ಷಿಪಣಿ ದಾಳಿ: ಸೌದಿ ಅರೇಬಿಯಾದಿಂದ ಪ್ರತಿದಾಳಿ

0
image_editor_output_image590911452-1791953401730

ರಿಯಾದ್: ಇರಾನ್ ಬೆಂಬಲಿತ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನೇತೃತ್ವದ ಸಮ್ಮಿಶ್ರ ಪಡೆಗಳ ನಡುವೆ ಭೀಕರ ಕಾಳಗ ಆರಂಭವಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ.

ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿರುವ ವಿಶ್ವದ ಅತಿದೊಡ್ಡ ತೈಲ ಕಂಪನಿ ಅರಾಮ್ಕೊ ಆಡಳಿತ ಕಟ್ಟಡದ ಮೇಲೆ ಹೌತಿಗಳು ಕ್ಷಿಪಣಿ ದಾಳಿ ನಡೆಸಿದ್ದು, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೌದಿ ಇಂಧನ ಸಚಿವಾಲಯ ತಿಳಿಸಿದೆ.

 

ಇದಕ್ಕೆ ತೀವ್ರ ಪ್ರತ್ಯುತ್ತರ ನೀಡಿರುವ ಸೌದಿ ನೇತೃತ್ವದ ಸಮ್ಮಿಶ್ರ ಪಡೆಗಳು, ಯೆಮನ್‌ನ ರಾಜಧಾನಿ ಸನಾ ಸೇರಿದಂತೆ ಹೌತಿ ನಿಯಂತ್ರಿತ ಪ್ರದೇಶಗಳ ಮೇಲೆ ಮಂಗಳವಾರ ರಾತ್ರಿ ವಾಯುದಾಳಿ ನಡೆಸಿವೆ.

ಸೌದಿ ರಾಜಧಾನಿ ರಿಯಾದ್ ಮತ್ತು ಪೂರ್ವ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಹೌತಿಗಳು ಉಡಾಯಿಸಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಡ್ರೋನ್ ಹಾಗೂ ಕ್ರೂಸ್ ಕ್ಷಿಪಣಿಗಳನ್ನು ಸೌದಿ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಆದರೆ, ರಿಯಾದ್‌ನ ಜನವಸತಿ ಪ್ರದೇಶಗಳಲ್ಲಿ ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದು, 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!