October 14, 2026

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ: ಮಾಜಿ ಶಾಸಕ ಕೆ. ರಘುಪತಿ ಭಟ್

0
image_editor_output_image-576563324-1791976299491

ಮಂಗಳೂರು: ಉಡುಪಿ ಕ್ಷೇತ್ರದ ಮಾಜಿ ಶಾಸಕ ಕೆ. ರಘುಪತಿ ಭಟ್, “ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ, ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಮಾತ್ರ ಖಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರಾವಳಿ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗುವಂತಹ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ.ಮಂಗಳೂರು ಸುದ್ದಿ ಸೇವೆ

 

ಕಾಂಗ್ರೆಸ್ ಸೇರ್ಪಡೆ ಕುರಿತು ಉತ್ತರಿಸಿದ ರಘುಪತಿ ಭಟ್, “ಕಾಂಗ್ರೆಸ್ ಪಕ್ಷದಿಂದ ನನಗೆ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತಿದ್ದೇನೆ. ಅದೇ ಸಮಯದಲ್ಲಿ ಬಿಜೆಪಿಯಿಂದಲೂ ಕರೆಯ ನಿರೀಕ್ಷೆಯಲ್ಲಿದ್ದೇನೆ. ಒಂದು ವೇಳೆ ಬಿಜೆಪಿ ಆಹ್ವಾನ ನೀಡಿದರೆ ಆ ಬಗ್ಗೆಯೂ ಪರಿಶೀಲಿಸಬಹುದು. ಪಕ್ಷ ಬದಲಾವಣೆಯಂತಹ ದೊಡ್ಡ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ ಬೆಂಬಲಿಗರು ಹಾಗೂ ಹಿತೈಷಿಗಳ ವಿಶ್ವಾಸವನ್ನು ಪಡೆದುಕೊಂಡೇ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ತಿಳಿಸಿದರು.ನಗರ ಪ್ರವಾಸ ನೋಡಿ

ಕಳೆದ ಚುನಾವಣೆಯ ಘಟನಾವಳಿಗಳನ್ನು ಸ್ಮರಿಸಿದ ಅವರು, ತಮ್ಮದೇ ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದರು. “ಕಳೆದ ಚುನಾವಣೆಯ ಸಂದರ್ಭದಲ್ಲಿ ನನಗೆ ಭಾರಿ ಅನ್ಯಾಯವಾಗಿದೆ. ನಮ್ಮದೇ ಪಕ್ಷದ ಕೆಲ ಹಾಲಿ ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆಯನ್ನು ಎದುರಿಸಬೇಕಾಯಿತು. ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಸಂಘದ ಹಿರಿಯರಾಗಲಿ ಅಥವಾ ಬಿಜೆಪಿಯ ಉನ್ನತ ನಾಯಕರಾಗಲಿ ಯಾರೊಬ್ಬರೂ ನನ್ನೊಂದಿಗೆ ಮಾತುಕತೆ ನಡೆಸದೇ ಇದ್ದದ್ದು ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ” ಎಂದರು

2028ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶವನ್ನು ರಘುಪತಿ ಭಟ್ ರವಾನಿಸಿದ್ದು, ಕರಾವಳಿ ರಾಜಕಾರಣದಲ್ಲಿ ಈ ಬೆಳವಣಿಗೆ ತೀವ್ರ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!