October 15, 2026

ನೈಸ್ ರಸ್ತೆ ಸೇತುವೆ ಬಳಿ ಗುಂಡು ಹಾರಿಸಿ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

0
image_editor_output_image-686479366-1792035602364

ಬೆಂಗಳೂರು: ಬೆಂಗಳೂರಿನ ಪಿಳ್ಳಗಾನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ಹಳೇ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮೂರು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ.

ಶ್ರೀನಿವಾಸ್ ಅಲಿಯಾಸ್ ಮೆಂಟಲ್ ಸೀನನ ಕಾಲಿಗೆ ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ ಎಂಬಾತನಿಂದ ಫೈರಿಂಗ್ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳು ಶ್ರೀನಿವಾಸ್, ಸಂಪಂಗಿ ಬಳಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ವೇಳೆ ವೈಯಕ್ತಿಕ ವಿಚಾರವಾಗಿ ಸೀನ ಮತ್ತು ಸಂಪಂಗಿ ನಡುವೆ ಗಲಾಟೆ ನಡೆದಿದೆ.

 

ಹೀಗಾಗಿ ಸುಮಾರು ಒಂದು ವರ್ಷದ ಹಿಂದೆ ಡ್ರೈವಿಂಗ್ ಕೆಲಸದಿಂದ ಸೀನನನ್ನ ತೆಗೆದುಹಾಕಲಾಗಿತ್ತು. ಇಬ್ಬರ ಮಧ್ಯೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಶ್ರೀನಿವಾಸ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಂಪಂಗಿ ಕಳೆದೊಂದು ತಿಂಗಳ ಹಿಂದೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು.

ನಿನ್ನೆ ಸಂಜೆ ಸಂಪಂಗಿ ಮೂವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಬೈಕ್‌ನಲ್ಲಿ ಬರುತ್ತಿದ್ದ ಶ್ರೀನಿವಾಸ್‌ನನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಸಂಪಂಗಿ ಲೈಸೆನ್ಸ್ ಹೊಂದಿರುವ ಬಂದೂಕಿನಿಂದ ಶ್ರೀನಿವಾಸ್ ಕಾಲಿಗೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಸದ್ಯ ಗಾಯಾಳು ಶ್ರೀನಿವಾಸ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!