ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ
ಬಂಟ್ವಾಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರ ಶಿಫಾರಸ್ಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಬಂಟ್ವಾಳ ಪುರಸಭಾ ನಿಕಟಪೂರ್ವ ಸದಸ್ಯರಾದ ಲುಕ್ಮಾನ್ ಬಂಟ್ವಾಳ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಲುಕ್ಮಾನ್ ಬಂಟ್ವಾಳ ಅವರನ್ನು ಅವರ ಸ್ವ ಗೃಹದಲ್ಲಿ ಬಂಟ್ವಾಳ ತಾಲೂಕು ಕೆಡಿಪಿ ಸದಸ್ಯರಾದ ಮಹಮ್ಮದ್ ನಂದಾವರ, ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸಿರಾಜ್ ಮದಕ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾದ ಸಿದ್ದೀಕ್ ಸರವು ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.



