ಮೈಸೂರಿನಲ್ಲಿ ಸ್ಲೀಪರ್ ಬಸ್ ಭೀಕರ ಅಪಘಾತ: ನಾಲ್ವರು ಮೃತ್ಯು, 20ಕ್ಕೂ ಹೆಚ್ಚು ಮಂದಿ ಗಾಯ
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ನಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ.
ಸ್ಲೀಪರ್ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ ಬಸ್ ಮೈಸೂರಿನಿಂದ ಮಡಿಕೇರಿ ಕಡೆಗೆ ಹೊರಟಿತ್ತು, ಲಾರಿ ಮಡಿಕೇರಿ ಭಾಗದಿಂದ ಮೈಸೂರು ಕಡೆಗೆ ಬರುತ್ತಿತ್ತು. ಕೀರನಹಳ್ಳಿ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.




