ದ.ಕ ಜಿಲ್ಲಾ ಕಾಂಗ್ರೆಸ್ ವೈದ್ಯಕೀಯ ಘಟಕ ಅಧ್ಯಕ್ಷರಾಗಿ ಜನಪ್ರಿಯ ಆಸ್ಪತ್ರೆಯ CEO ಡಾ. ಕಿರಾಸ್ ಪರ್ತಿಪ್ಪಾಡಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವೈದ್ಯಕೀಯ ಘಟಕದ ನೂತನ ಅಧ್ಯಕ್ಷರಾಗಿ ಜನಪ್ರಿಯ CEO ಆಗಿರುವ Dr. ಕಿರಾಶ್ ಪರ್ತಿಪ್ಪಾಡಿ ಅವರು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಡಾಕ್ಟರ್ಸ್ ಸೆಲ್ ರಾಜ್ಯ ಘಟಕ ಈ ಆದೇಶ ಹೊರಡಿಸಿದೆ.
ಡಾ. ಕಿರಾಶ್ ಪರ್ತಿಪ್ಪಾಡಿ ಅವರು 2018ರಲ್ಲಿ ಭಾರತೀಯ ಯೂತ್ ಕಾಂಗ್ರೆಸ್ ಡಾಕ್ಟರ್ಸ್ ಸೆಲ್ ಇದರ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಹೋರಾಟಗಾರರಾಗಿ ಮುಂಚೂಣಿಯಲ್ಲಿದ್ದರು. ವೈದ್ಯಕೀಯ ಘಟಕದಲ್ಲಿ ಹಲವು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪ್ರಸ್ತುತ ಮಂಗಳೂರು ಪಡೀಲ್ ಜನಪ್ರಿಯ ಆಸ್ಪತ್ರೆಯಲ್ಲಿ ಸಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ




