October 17, 2026

75ರ ವೃದ್ಧನ ಕೈಹಿಡಿಯಲು ಮುಂದಾದ 30ರ ಯುವತಿ: ವಿಡಿಯೋ ವೈರಲ್

0
image_editor_output_image-434059286-1792206866781

ಲಕ್ನೋ: ‘ಪ್ರೀತಿಗೆ ಯಾವುದೇ ವಯಸ್ಸಿನ ಮಿತಿಯಿಲ್ಲ’ ಎಂಬ ಮಾತಿಗೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ 45 ವರ್ಷಗಳ ವಯಸ್ಸಿನ ಅಂತರವಿರುವ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಔರೈಯಾ ಜಿಲ್ಲೆಯ 30 ವರ್ಷದ ಸಾಮಾಜಿಕ ಜಾಲತಾಣ ಕಂಟೆಂಟ್ ಕ್ರಿಯೇಟರ್ ರೀನಾ ಹಾಗೂ 75 ವರ್ಷದ ರಾಮ್ ಸಾಗರ್ ಎಂಬ ವೃದ್ಧ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥದ ಫೋಟೋ ಹಾಗೂ ವೀಡಿಯೊಗಳು ವೈರಲ್ ಆಗುತ್ತಿದ್ದಂತೆ ನೆಟ್ಟಿಗರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

Leave a Reply

Your email address will not be published. Required fields are marked *

error: Content is protected !!