ಮಂಗಳೂರು: MRPL ಸ್ಪೋಟ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತ್ಯು
ಸುರತ್ಕಲ್: ಇಲ್ಲಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಡಿಸಿಲ್ವ ಅವರು ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಜೇಶ್ ಡಿಸಿಲ್ವ ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಎಂ.ಆರ್.ಪಿ.ಎಲ್. ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತದೇಹವನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಸೆ.30ರಂದು mrpl ನಲ್ಲಿ ಸ್ಫೋಟ ನಡೆದಿತ್ತು.




