October 17, 2026

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ebcff788-898c-4ad1-a6cc-075358006339

ನವದೆಹಲಿ: ಬಿಜೆಪಿ ಹಿರಿಯ ನಾಯಕರಾಗಿರುವ ಎಲ್.ಕೆ.ಅಡ್ವಾಣಿಯನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

98 ವರ್ಷದ ನಾಯಕರನ್ನು ಶುಕ್ರವಾರ ಸಂಜೆ ಸುಮಾರು 7.30 ಕ್ಕೆ ಜಸೋಲಾ ವಿಹಾರ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ಹೇಳಿವೆ.

ಅಡ್ವಾಣಿ ಅವರಿಗೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಡ್ವಾಣಿ ಅವರ ಆರೋಗ್ಯದ ಕುರಿತು ಶೀಘ್ರದಲ್ಲೇ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಆಸ್ಪತ್ರೆಗೆ ತೆರಳಿ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಹಾಗೆಯೇ ವೈದ್ಯರಿಂದಲೂ ಅಡ್ವಾಣಿ ಅವರು ಆರೋಗ್ಯದ ಕುರಿತ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

error: Content is protected !!