October 19, 2026

ಪುತ್ತೂರು: ಮುಕ್ರಂಪಾಡಿಯಲ್ಲಿ ಆಟೋ ರಿಕ್ಷಾ ಢಿಕ್ಕಿ: ಸ್ಕೂಟರ್‌ ಸವಾರೆ ಮೃತ್ಯು

0
image_editor_output_image1066246919-1792381405086

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರಿನ ಮುಕ್ರಂಪಾಡಿಯಲ್ಲಿ ಆಟೋ ರಿಕ್ಷಾ ಹಾಗೂ ಸ್ಕೂಟರ್‌ ಮಧ್ಯೆ ಢಿಕ್ಕಿ ಸಂಭವಿಸಿ ಸ್ಕೂಟರ್‌ ಸವಾರೆ, ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್‌ ಅಸಿಸ್ಟೆಂಟ್‌ ಮೃತಪಟ್ಟ ಘಟನೆ ಸಂಭವಿಸಿದೆ.

ಆಟೋ ರಿಕ್ಷಾದಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ. ಸ್ಕೂಟರ್‌ ಸವಾರೆ ಮುಕ್ರಂಪಾಡಿ ನಿವಾಸಿ ಮಮತಾ (40) ಮೃತಪಟ್ಟವರು.

ರಿಕ್ಷಾ ಚಾಲಕ ಇಸಾಕ್‌ ಗಾಯಗೊಂಡಿದ್ದಾರೆ. ಮಮತಾ ಅವರು ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್‌ ಅಸಿಸ್ಟೆಂಟ್‌ ಆಗಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಮನೆಗೆ ತೆರಳುವುದಕ್ಕೆ ಸ್ಕೂಟರನ್ನು ಬಲಕ್ಕೆ ತಿರುಗಿಸಿದ ಸಂದರ್ಭದಲ್ಲಿ ಎದುರಿನಿಂದ ರಿಕ್ಷಾ ಆಗಮಿಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಮಮತಾ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು, ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!