October 19, 2026

ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಆರೋಪಿಗಳ  ಫೋಟೋ ರಿಲೀಸ್

0
image_editor_output_image-1772926075-1792381951815

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್‌ಬಾಲ್ ಮೈದಾನದಿಂದ ಹೊರಡುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ಮೊದಲ ಫೋಟೋ ಬಹಿರಂಗವಾಗಿದೆ.

ಫೋಟೋದಲ್ಲಿ ಇಬ್ಬರು ಆರೋಪಿಗಳು ಬಿಳಿ ಬಣ್ಣದ ಶರ್ಟ್ ಧರಿಸಿರುವುದು ಕಂಡುಬಂದಿದ್ದು, ಅವರಲ್ಲಿ ಒಬ್ಬ ಟೋಪಿ ಧರಿಸಿದ್ದಾನೆ.

ಆರೋಪಿಗಳ ಗುರುತನ್ನುಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಆದರೆ, ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ದಾಳಿಯ ಹೊಣೆ ಹೊತ್ತುಕೊಂಡಿರುವುದಾಗಿ ಈ ಗ್ಯಾಂಗ್‌ನ ಹೆಸರಿನಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಪೋಸ್ಟ್ ಪ್ರಕಟವಾಗಿತ್ತು. ಆದರೆ, ಆ ಪೋಸ್ಟ್‌ನ ಸತ್ಯಾಸತ್ಯತೆ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!