ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಯುವಕನಿಗೆ ಚೂರಿ ಇರಿತ
ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ವೇಳೆ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.
ಗಾಯಗೊಂಡ ಯುವಕನನ್ನು ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ವೈಯಕ್ತಿಕ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯ ಯುವಕರ ತಂಡವೊಂದು ಪ್ರಕಾಶ್ ಪೂಜಾರಿ ಅವರಿಗೆ ಚೂರಿಯಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆಯ ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




