October 19, 2026

ಬಂಟ್ವಾಳ :ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಪಿಕಪ್- ಸ್ಕೂಟರ್ ಅಪಘಾತ: ಇಬ್ಬರ ದಾರುಣ ಸಾವು

0
IMG-20261019-WA0049

ಬಂಟ್ವಾಳ: ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಮಹೀಂದ್ರಾ ಪಿಕಪ್ ವಾಹನವು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತಪಟ್ಟವರನ್ನು ಮೊಹಮ್ಮದ್ ಅಬ್ದುಲ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ.

ಪಿಕಪ್ ವಾಹನವು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ವಿದ್ಯುತ್ ಕಂಬವೇ ತುಂಡಾಗಿ ನೆಲಕ್ಕುರುಳಿದೆ. ಅಪಘಾತದ ತೀವ್ರತೆಗೆ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತಪಟ್ಟವರನ್ನು ಮೊಹಮ್ಮದ್ ಅಶ್ಶಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಮಂಜನಾಡಿ ಮೂಲದವರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!