October 20, 2026

30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್

0b29e12d-a6d9-4cc2-b943-ae211be6f7be

ಬೆಂಗಳೂರು: ಉಪ್ಪಾರಪೇಟೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಸೀಜ್ ಮಾಡಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ 2 ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್‌ಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದರು. ಕೇರಳಕ್ಕೆ ಸಾಗಾಟದ ವೇಳೆ ಸಿಸಿಬಿ ಪೊಲೀಸರು ನೇರವಾಗಿ ಆರೋಪಿಗಳ ಮೇಲೆ ದಾಳಿ ಮಾಡಿ ಮಹಮದ್ ರಿಯಾಝ್ ಹಾಗೂ ಕುಮಾರನ್ ಎಂಬವರನ್ನ ವಶಕ್ಕೆ ಪಡೆದು 20 ಲಕ್ಷ ಮೌಲ್ಯದ ಸಿಗರೇಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಉಪ್ಪಾರಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ 10 ಲಕ್ಷ ಮೌಲ್ಯದ ಸಿಗರೇಟ್‌ಗಳನ್ನು ಸೀಜ್ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಮಹಮದ್ ಗುಲ್ಜಾರ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡೂ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಬಂಧಿಸಿದ್ದು, ಒಟ್ಟು 30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

error: Content is protected !!