October 20, 2026

ಪುತ್ತೂರು: ತಲ್ವಾರ್, ಬಿಯರ್ ಬಾಟಲಿ ಹಿಡಿದು ಗಲಾಟೆ; ಇಬ್ಬರ ಬಂಧನ

73cca402-d447-44f1-afb8-96d077757fcd

ಪುತ್ತೂರು: ತಲ್ವಾರ್ ಹಾಗೂ ಬಿಯರ್ ಬಾಟಲಿ ಹಿಡಿದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿಯ ಕಾರ್ತಿಕ್ ಬಾರ್ ಹೊರಭಾಗದಲ್ಲಿ ಅಕ್ಟೋಬರ್ 18ರ ರಾತ್ರಿ ಸಂಭವಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇಳಂತಿಲ ವಾಸಿ ಮಂಜುನಾಥ್ ಹಾಗೂ ಕರವಲು ವಾಸಿ ವಿಶ್ವನಾಥ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಕರವಲು ನಿವಾಸಿ ಮುನ್ನಾ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮದ್ಯದ ಅಮಲಿನಲ್ಲಿದ್ದ ಗುಂಪು ಬಾರ್ ಹೊರಗಿನ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿತ್ತು. ಗಲಾಟೆಯ ವೇಳೆ ಮಂಜುನಾಥ್ ತಲ್ವಾರ್ ಬೀಸುತ್ತಿದ್ದರೆ, ಮುನ್ನಾ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದನು.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಮಂಜುನಾಥ್‌ನನ್ನು ಬಂಧಿಸಿ ಆತನ ಬಳಿಯಿದ್ದ ತಲ್ವಾರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಪೊಲೀಸರನ್ನು ಕಂಡ ಕೂಡಲೇ ಮುನ್ನಾ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.

ಆರೋಪಿಗಳ ವಿಚಾರಣೆ ವೇಳೆ ಕುಡಿದ ಮತ್ತಿನಲ್ಲಿ ಮುನ್ನ ಎಂಬಾತನು ಮಂಜುನಾಥ್ ಎಂಬಾತನ ಮನೆಯವರಿಗೆ ಅವ್ಯಾಚವಾಗಿ ಬೈದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದು ಗಲಾಟೆಯಾಗಿರುವುದಾಗಿ ತಿಳಿದುಬಂದಿದೆ. ವಿಚಾರಣೆ ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಪೊಲೀಸರು ಹಂಚಿಕೊಂಡಿರುವ ಹೊಸ ವಿವರಗಳ ಪ್ರಕಾರ, ಮಂಜುನಾಥ್ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ದಾಖಲೆ ಇದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 135/2026 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ ಸೆಕ್ಷನ್ 194, 296, ಮತ್ತು 351(3) ಮತ್ತು 1959 ರ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25(1ಬಿ)(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿಯು ಮದ್ಯದ ಅಮಲಿನಲ್ಲಿ ಮಂಜುನಾಥ್ ಕುಟುಂಬದ ಸದಸ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ಬಹಿರಂಗಪಡಿಸಿದ್ದಾನೆ ಎಂದು ವರದಿಯಾಗಿದೆ. ವಿಚಾರಣೆಯ ನಂತರ, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

error: Content is protected !!