October 20, 2026

ಡೆತ್‌ನೋಟ್‌ ಬರೆದಿಟ್ಟು ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

c9cce99d-5380-47f6-85e9-b9253f20c312

ಕೊಪ್ಪಳ: ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಖಾಸಗಿ ಶಾಲಾ ಶಿಕ್ಷಕಿ ಸಂಗೀತ ಮೇಟಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಅ.19 ರಂದು ಕೊಪ್ಪಳಕ್ಕೆ ಹೋಗಿಬರುವುದಾಗಿ ಹೇಳಿ ಸಂಗೀತ ಹೋಗಿದ್ದರು. ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿ ಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಪ್ರಿಯತಮ ಸೇರಿ ಮೂವರನ್ನು ಗಲ್ಲಿಗೇರಿಸಿ
ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿರುವ ಸಂಗೀತ, ಸುಮಾರು 14 ವರ್ಷಗಳಿಂದ ತನ್ನ ಸಂಬಂಧಿ ವಿಕಾಸ್‌ನನ್ನ ಪ್ರೀತಿ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾಳೆ. ಪ್ರೀತಿಯ ವಿಚಾರ ಇಬ್ಬರ ಮನೆಯವರಿಗೂ ಗೊತ್ತಿತ್ತು. ಆದರೆ ಮದುವೆ ವಿಚಾರಕ್ಕೆ ವಿಕಾಸ್ ಮನೆಯಲ್ಲಿ ಗೊಂದಲವಿತ್ತು.

error: Content is protected !!