ಬೆಳ್ತಂಗಡಿ: ಸ್ನೇಹಿತರೊಂದಿಗೆ ಸ್ನಾನ ಮಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು
ಬೆಳ್ತಂಗಡಿ: ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ಅಕ್ಟೋಬರ್ 20 ರ ಮಧ್ಯಾಹ್ನ ಸ್ನೇಹಿತರೊಂದಿಗೆ ಸ್ನಾನ ಮಾಡುತ್ತಿದ್ದಾಗ 21 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಮೃತನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ ಗೌಡ ಅವರ ಪುತ್ರ ಕೀರ್ತನ್ ಎಂದು ಗುರುತಿಸಲಾಗಿದೆ.
ಕೀರ್ತನ್ ಮತ್ತು ಅವನ ಸ್ನೇಹಿತರು ನಿಡ್ಲೆ ಗ್ರಾಮದ ಪರ್ಪಿಕಲ್ಲು ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದು, ಕೀರ್ತನ್ ಆಳವಾದ ನೀರಿಗೆ ಇಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರಂತ ಘಟನೆ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಕೀರ್ತನ್ ಅವರ ಮೃತದೇಹವನ್ನು ನೀರಿನಿಂದ ಹೊರತೆಗೆದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು ಎಂದು ತಿಳಿದುಬಂದಿದೆ.
ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




