October 21, 2026

ಟ್ರಾಫಿಕ್ ಸಿಗ್ನಲ್‌ನಲ್ಲಿ  ಬೈಕ್‌ ಢಿಕ್ಕಿ: ಬೆಳ್ತಂಗಡಿಯ ಯುವಕ ಮೃತ್ಯು

0
image_editor_output_image-24599383-1792568302972

ಬೆಳ್ತಂಗಡಿ: ಮೈಸೂರು ದಸರಾ ಉತ್ಸವಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ 23 ವರ್ಷದ ಯುವಕನೊಬ್ಬ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಅ. 18 ರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ.

ಮೃತರನ್ನು ಕೊಳಂಬೆ ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಮನೋಹರ ಎಂದು ಗುರುತಿಸಲಾಗಿದೆ. ಸಹಸವಾರ ಕೊಯ್ಯೂರಿನ ಬಿರ್ಕೆ ನಿವಾಸಿ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಮನೋಹರ್ ಮತ್ತು ದೀಕ್ಷಿತ್, ದಸರಾ ಆಚರಣೆಯನ್ನು ವೀಕ್ಷಿಸಲು ಅಕ್ಟೋಬರ್ 18 ರಂದು ಬೈಕ್‌ನಲ್ಲಿ ಮೈಸೂರಿಗೆ ಹೋಗಿದ್ದರು.

ಅವರು ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಸಿದ್ಧಾರ್ಥನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275 ರ ಟ್ರಾಫಿಕ್ ಸಿಗ್ನಲ್‌ನಲ್ಲಿ ಸ್ಕೂಟರ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಡಿಕ್ಕಿ ಹೊಡೆದ ಪರಿಣಾಮ ಮನೋಹರ ರಸ್ತೆಗೆ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡರು. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದರು, ಆದರೆ ದೀಕ್ಷಿತ್ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!